IMPORTANCE OF DHANURMAASA:
🕉 *ಧನುರ್ಮಾಸ ಆರಂಭ 16-12-2017 ಮಕರಸಂಕ್ರಾಂತಿಯ ವರೆಗೆ ಮೂರು ರಂಗ ದರ್ಶನಕ್ಕೆಪ್ರಶಸ್ತ ಸಮಯ ದರ್ಶನಕ್ಕಾಗಿ ದರ್ಶನ ಮಾಡಿ ಅನುಗ್ರಹ ಪಡೆಯಬಹುದು.* 🕉
🕉 *ಧನುರ್ಮಾಸ ಆರಂಭ 16-12-2017 ಮಕರಸಂಕ್ರಾಂತಿಯ ವರೆಗೆ ಮೂರು ರಂಗ ದರ್ಶನಕ್ಕೆಪ್ರಶಸ್ತ ಸಮಯ ದರ್ಶನಕ್ಕಾಗಿ ದರ್ಶನ ಮಾಡಿ ಅನುಗ್ರಹ ಪಡೆಯಬಹುದು.* 🕉
ಅದಿ ರಂಗನಾಥ, ಮಧ್ಯ ರಂಗನಾಥ
ಅಂತ್ಯ ರಂಗನಾಥ
ತ್ರಿರಂಗ ದರ್ಶನಂ - TRI RANGA DARSHANAM
ಒಂದೇ ದಿನದಲ್ಲಿ ಮೂರು ಕಡೆ ಬೆಳಿಗ್ಗೆ ಯಿಂದ ಸಂಜೆ ಸೂರ್ಯ ಹಸ್ತದ ಒಳಗೆ
ಎರಡು ದಾರಿಯಲ್ಲಿ ದರ್ಶನ ಪಡೆಯಬಹುದು.
ಒಂದನೆಯ ದಾರಿ.
ಆಧಿರಂಗ ಶ್ರೀರಂಗಪಟ್ಟಣದಿಂದ
ADI RANGA - SRIRANGPATTNA
ಬನೂರು - BAHNUR
ಮಳವಳ್ಳಿ - MALAVALI
ಶಿವನ ಸಮುದ್ರ - SHIVANASAMUDRAM
ಮಧ್ಯರಂಗ - MADYARANGA
ಕೊಳ್ಳೇಗಾಲ - KOLLEGAL
ಯಳಂದೂರು - YALANDUR
ಚಾಮರಾಜನಗರ - C.R.NAGAR
ಬೆನಕನಹಳ್ಳಿ - BINAKANAHALLI
ಡಿಂಬಮ್ - DIMBAM
ಬನ್ನಾರಿ - BANNARI
ಸತ್ಯಮಂಗಲ - SATYAMANGALA
ಗೋಪಿಚೆಟ್ಟಿಪಾಳ್ಯ - GOPICHETTIPALAYAM
ಈರೋಡ್ - ERODE
ನಾಮಕಲ್ - NAMAKHAL
ತೂಟ್ಟಯಮ್ - THOTTAYAM
ಮುಸಿರಿ - MUSIRI
ಗುಣಶ್ರೀಲಮ್ - GUNASHEELAM
ತಿರುಚ್ಚಿ ಶ್ರೀರಂಗಂ - TIRCHY SRIRANGAM
ಅಂತ್ಯರಂಗ - ANTHYA RANGAM
ಎರಡನೆಯ ದಾರಿ.
ಆಧಿರಂಗ ಶ್ರೀರಂಗಪಟ್ಟಣದಿಂದ
ADI RANGA - SRIRANGPATTNA
ಬನೂರು - BAHNUR
ಮಳವಳ್ಳಿ - MALAVALI
ಶಿವನ ಸಮುದ್ರ - SHIVANASAMUDRAM
ಮಧ್ಯರಂಗ - MADYARANGA
ಕೊಳ್ಳೇಗಾಲ - KOLLEGAL
ಮಹದೇಶ್ವರಬೆಟ್ಟ - M M HILLS
ಪಾಲರ್ - PALAR
ಮೆಟ್ಟೂರು - METTUR
ಸೇಲಂ - SELAM
ನಾಮಕಲ್ - NAMAKHAL
ತೂಟ್ಟಯಮ್ - THOTTAYAM
ಮುಸಿರಿ - MUSIRI
ಗುಣಶ್ರೀಲಮ್ - GUNASHEELAM
ತಿರುಚ್ಚಿ ಶ್ರೀರಂಗಂ - TIRCHY SRIRANGAM
ಅಂತ್ಯರಂಗ - ANTHYA RANGAM
ಕಾವೇರಿ ನದಿಯ ದಡದಲ್ಲಿರುವ ದೇವಸ್ಥಾನಗಳು.
ತ್ರಿರಂಗ ದರ್ಶನದ ದೇವಾಲಯಗಳು
*ಆದಿ, ಮಧ್ಯ, ಅಂತ್ಯ ರಂಗಗಳ ಶ್ರೀರಂಗನಾಥ*
ವಿಷ್ಣು
ಭಗವಂತನು ಏಳು ಹೆಡೆಗಳ ಸರ್ಪ ಆದಿಶೇಷನ ಮೇಲೆ ಶಯನಾವಸ್ಥೆಯ ಭಂಗಿಯಲ್ಲಿ ಆರೂಢನಾಗಿ
ಭಕ್ತರ ಮನದಲ್ಲಿ ಶ್ರೀರಂಗನಾಥ ಸ್ವಾಮಿಯಾಗಿ ಆಶೀರ್ವದಿಸುತ್ತಾನೆ ಎಂಬುದು ಹಿಂದೂ ಧರ್ಮದ
ನಂಬಿಕೆ. ಜಗತ್ಪಾಲಕನಾದ ಶ್ರೀರಂಗನಾಥನಿಗೆ ಮುಡಿಪಾದ ಅದೇಷ್ಟೊ ದೇವಸ್ಥಾನಗಳು ನಮ್ಮ
ನಾಡಿನಲ್ಲಿವೆ. ಇವುಗಳಲ್ಲಿ ವಿಶೇಷವಾಗಿವೆ ರಂಗನಾಥನ ತ್ರಿರಂಗ ಕ್ಷೇತ್ರಗಳು. ರಂಗನಾಥನ ಈ
ತ್ರಿರಂಗ ಕ್ಷೇತ್ರಗಳು ಆದಿ ರಂಗ, ಮಧ್ಯ ರಂಗ ಹಾಗೂ ಅಂತ್ಯ ರಂಗಗಳೆಂದು
ಪ್ರಸಿದ್ಧವಾಗಿದ್ದು ಕಾವೇರಿ ನದಿಯಗುಂಟ ರೂಪಿತವಾದ ಮೂರು ದ್ವೀಪಗಳಲ್ಲಿ ನೆಲೆಸಿವೆ.
ಒಂದು ನಂಬಿಕೆಯ ಪ್ರಕಾರ, ಕ್ರಮವಾಗಿ ಈ ಮೂರು ಸ್ಥಳಗಳಲ್ಲಿ ನೆಲೆಸಿರುವ ರಂಗನಾಥನನ್ನು
ದರ್ಶಿಸಿದರೆ ಎಲ್ಲ ಪಾಪ-ಕರ್ಮಗಳು ನಾಶ ಹೊಂದಿ ಭಗವಂತನ ಕೃಪೆ ಉಂಟಾಗುತ್ತದೆ
ಎನ್ನಲಾಗಿದೆ. ಪ್ರಸ್ತುತ ಲೇಖನವು ಆ ಮೂರು ರಂಗ ಕ್ಷೇತ್ರಗಳು ಯಾವುವು ಹಾಗೂ
ಅವೆಲ್ಲೆಲ್ಲಿವೆ ಎಂಬುದರ ಕುರಿತು ತಿಳಿಸುತ್ತದೆ.
ಮೊದಲ ಅದಿ ರಂಗ ಶ್ರೀರಂಗಪಟ್ಟಣದ ಕರ್ನಾಟಕ ,
ಶ್ರೀರಂಗಪಟ್ಟಣ: ಮೂರು ರಂಗಗಳ ಪೈಕಿ ಮೊದಲನೇಯ ಆದಿ ರಂಗವೆ ಈ ಕ್ಷೇತ್ರ.
ಮೈಸೂರು
ನಗರಕ್ಕೆ ಅತಿ ಹತ್ತಿರದಲ್ಲಿರುವ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ
ಕ್ಷೇತ್ರವಾಗಿದೆ. ಇಲ್ಲಿ ಸ್ಥಿತವಿರುವ ಶ್ರೀರಂಗನಾಥ ಸ್ವಾಮಿ ದೇವಾಲಯವು ಅತಿ ಪ್ರಸಿದ್ಧಿ
ಪಡೆದಿದ್ದು ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ದಿನನಿತ್ಯ ಈ ಪುಣ್ಯ ಕ್ಷೇತ್ರಕ್ಕೆ ಭೇಟಿ
ನೀಡುತ್ತಿರುತ್ತಾರೆ.
ಶ್ರೀರಂಗಪಟ್ಟಣ:
ಮೈಸೂರು ನಗರದಿಂದ ಕೇವಲ 20 ಕಿ.ಮೀ ದೂರದಲ್ಲಿರುವ ಶ್ರೀರಂಗಪಟ್ಟಣವು ಬೆಂಗಳೂರಿನಿಂದ
120 ಕಿ.ಮೀಗಳಷ್ಟು ದೂರದಲ್ಲಿದೆ. ಎರಡೂ ನಗರಗಳಿಂದ ಇಲ್ಲಿಗೆ ತೆರಳಲು ರೈಲು ಹಾಗೂ
ಬಸ್ಸುಗಳು ಸುಲಲಿತವಾಗಿ ದೊರೆಯುತ್ತವೆ.
ವಿಶೇಷ ಸೂಚನೆ : ಧನುರ್ಮಾಸದಲ್ಲಿ ಬೆಳಿಗ್ಗೆ 5 ಗಂಟೆಗೆ ದರ್ಶನ ವ್ಯವಸ್ಥೆ ಇರುವುದು.
ದರ್ಶನದ ವೇಳೆ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 01.00 ಘಂಟೆ ಹಾಗೂ ಸಂಜೆ 4.00 ಘಂಟೆಯಿಂದ ರಾತ್ರಿ 8.00 ಘಂಟೆಯವರೆಗೆ.
ಎರಡನೆಯ ಮದ್ಯ ರಂಗ ಶಿವನಸಮುದ್ರ ಕರ್ನಾಟಕ.
ಶಿವನಸಮುದ್ರಂ: ತ್ರಿರಂಗ ಕ್ಷೇತ್ರಗಳ ಎರಡನೇಯ ಕ್ಷೇತ್ರ ಮಧ್ಯ ರಂಗವಾಗಿದ್ದು ಇದು ಶಿವನಸಮುದ್ರಂ ಪಟ್ಟಣದಲ್ಲಿದೆ.
ಶ್ರೀರಂಗಪಟ್ಟಣದಿಂದ ಮಳುವಳ್ಳಿ ಮಾರ್ಗವಾಗಿ 87 ಕಿ.ಮೀ ಗಳಷ್ಟು ದೂರದಲ್ಲಿ ಈ ಕ್ಷೇತ್ರವನ್ನು ತಲುಪಬಹುದು.
ಸಾಂಕೇತಿಕವಾಗಿ
ಇದು ವಿಷ್ಣುವಿನ ಯವ್ವನಾವಸ್ಥೆಯನ್ನು ಸೂಚಿಸುವುದರಿಂದ ಇಲ್ಲಿರುವ ರಂಗನ
ದೇವಸ್ಥಾನವನ್ನು ಮೋಹನರಂಗ ಅಥವಾ ಜಗನ್ಮೋಹನ ರಂಗ ದೇವಸ್ಥಾನ ಎಂತಲೂ ಕರೆಯುತ್ತಾರೆ.
ಕೊನೆಯ ಮೂರನೆ ಅಂತ್ಯ ರಂಗ ಶ್ರೀರಂಗಂ ತಮಿಳುನಾಡು ,
ಶ್ರೀರಂಗಂ: ತ್ರಿರಂಗಗಳ ಪೈಕಿ ಕೊನೆಯ ಅಥವಾ ಅಂತ್ಯ ರಂಗವು ತಮಿಳು ನಾಡಿನ ಶ್ರೀರಂಗಂನಲ್ಲಿದೆ. ತಿರುಚ್ಚಿಯಿಂದ ಶ್ರೀರಂಗಂಗೆ ಬಸ್ ಸೌಲಭ್ಯವಿದೆ.
ಚೆನ್ನೈ,
ಕನ್ಯಾಕುಮಾರಿ, ಹೈದರಾಬಾದ್, ಬೆಂಗಳೂರು, ಕೋಯಮತ್ತೂರು, ಮೈಸೂರು, ಮಂಗಳುರು, ಕೊಚ್ಚಿ,
ರಾಮೇಶ್ವರಂ, ತಂಜಾವೂರು, ಮದುರೈ, ಚಿದಂಬರಮ್, ತೂತುಕುಡಿ, ಕೊಲ್ಲಮ್, ತೆಂಕಸಿ ಮತ್ತು
ತಿರುಪತಿಯಿಂದ ಬಸ್ ಸೌಕರ್ಯಗಳು ತಿರುಚ್ಚಿಗೆ ಇವೆ. ಶ್ರೀರಂಗಂನಲ್ಲಿರುವ ಈ ದೇವಾಲಯವು
ತ್ರಿರಂಗಗಳ ಪೈಕಿ ಅತಿ ದೊಡ್ಡ ದೇವಾಲಯವಾಗಿರುವುದೂ ಅಲ್ಲದೆ ದೇಶದ ಅತಿ ದೊಡ್ಡ ದೇವಾಲಯಗಳ
ಪೈಕಿಯೂ ಒಂದಾಗಿದೆ.
ಧನುರ್ಮಾಸದ ಸಮಯದಲ್ಲಿ ದೇವಾಲಯ ಬೆಳಿಗ್ಗೆ 5ಗಂಟೆಗೆ ದರ್ಶನದ ವ್ಯವಸ್ಥೆಯ ಕಾರಣ ಒಂದೇ ದಿನದಲ್ಲಿ ಮೂರು ರಂಗನಾಥ ಸ್ವಾಮಿ ದರ್ಶನ ಪಡೆಯಬಹುದು.
ವೈಕುಂಠ ಏಕದಶಿಯ ದರ್ಶನ ವಿಶೇಷ.
*****************************************************************************************************
*ಚೈತ್ರ ಮಾಸದ ಮಹತ್ವ - 1*
ಎಲ್ಲ
ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.
’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ.
ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ
ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ
ಕಾರಣಗಳಿವೆ.
**********************************************************************************************************
ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು *ಸೂರ್ಯನ ಜನ್ಮದಿನ*
ಅಲ್ಲದೇ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ,
*****************************************************************************************************
*ಚೈತ್ರ ಮಾಸದ ಮಹತ್ವ - 1*
ನೈಸಗಿಕ
ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ – ಸಂಪಾತದ ಮೇಲೆ
ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ
(ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು)
ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು
ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫)
ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ
ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ
ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು
ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು
ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ
ತುಂಬಿರುತ್ತದೆ. ತದ್ವಿರುದ್ಧವಾಗಿ ಡಿಸೆಂಬರ್ ೩೧ ರಂದು ರಾತ್ರಿ ೧೨ ಗಂಟೆಗೆ
ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಲಯಕಾಲಕ್ಕೆ ಸಂಬಂಧಿಸಿದೆ. ಯುಗಾದಿ
ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ
ದಿನದೊಂದಿಗೆ ಮಾಡಬಹುದು.
ನಿಸರ್ಗದ
ನಿಯಮವನ್ನು ಅನುಸರಿಸಿ ಮಾಡಿದ ವಿಷಯಗಳು ಮನುಷ್ಯರಿಗೆ ಪೂರಕವಾಗಿರುತ್ತವೆ ಮತ್ತು
ಅದಕ್ಕೆ ವಿರುದ್ಧವಾಗಿ ಮಾಡಿರುವ ವಿಷಯಗಳು ಮನುಷ್ಯರಿಗೆ ಹಾನಿಕಾರಿಯಾಗಿರುತ್ತವೆ.
ಆದುದರಿಂದ ಪಾಶ್ಚಾತ್ಯ ಸಂಸ್ಕೃತಿಗನುಸಾರ ಜನವರಿ ಒಂದರಂದು ಹೊಸವರ್ಷಾರಂಭವನ್ನು ಮಾಡದೇ,
ಯುಗಾದಿ ಪಾಡ್ಯದಂದೇ ಹೊಸವರ್ಷವನ್ನು ಆಚರಿಸುವುದರಲ್ಲಿ ನಮ್ಮ ನಿಜವಾದ ಹಿತವಿದೆ.
ಐತಿಹಾಸಿಕ
ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು
ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ
‘ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ
ವಿಜಯವನ್ನು ಪಡೆದನು.
ಆಧ್ಯಾತ್ಮಿಕ
ಕಾರಣಗಳು : ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. ಅರ್ಥಾತ್ ಈ
ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು
ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ
ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ
ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ
ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ.
**********************************************************************************************************
ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು *ಸೂರ್ಯನ ಜನ್ಮದಿನ*
ಅಲ್ಲದೇ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ,
*ಇದೇ
ಫೆಬ್ರವರಿ ೩ ಶುಕ್ರವಾರ ದಂದು ಸೂರ್ಯ ಆರಾಧನೆಯ ರಥಸಪ್ತಮಿ* ದಿನವೆಂದು
ಆಚರಿಸಲಾಗುತ್ತದೆ.
ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ
ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆಯನ್ನು, ಚೈತನ್ಯವನ್ನು ತುಂಬುವ ಸೂರ್ಯನ
ಪೂಜೆಯೇ ಈ ದಿವಸದ ಮುಖ್ಯ ಆಚರಣೆಯಾಗಿದೆ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು,
ಕೋರಿಕೆಗಳು ಫಲಪ್ರದವಾಗಿರುತ್ತವೆ. ಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ
ಚಳಿ ಮುದುಡಿಕೊಂಡು ಮೈಯಲ್ಲಿ ನವಚೇತನ ತುಂಬಿದಂತೆನಿಸುತ್ತದೆ. ಅಂಗಾಂಗಗಳಲ್ಲಿ
ಕಾರ್ಯಕ್ಷಮವಾಗುತ್ತಿವೆ. ಈ ಉಪಕಾರಕ್ಕಾಗಿ ಸೂರ್ಯನನ್ನು ಪೂಜಿಸುವುದು ರೂಡಿಯಲ್ಲಿದೆ.
ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ
ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಿದೆ. ವೈವಸ್ವತ ಮನ್ವಂತರದ ಆರಂಭದ ದಿನ.
ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಟ
ದಿನ.
*ರಥಸಪ್ತಮಿ* ದಿವಸ ರೋಗ ನಿವಾರಣೆಯನ್ನು, ದೇಹದಾರ್ಢ್ಯ ಹಾಗೂ ಆರೋಗ್ಯವನ್ನು
ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ
ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ
ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ಈ ದಿವಸ ಸೂರ್ಯಾರಾಧನೆಯನ್ನು ಮಾಡಿದರೆ ಬೇಗ
ಗುಣಹೊಂದುತ್ತಾರೆ.
ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ *ಸೂರ್ಯ ನಮಸ್ಕಾರ*ಕ್ಕೆ ನೀಡಬಹುದು. ಏಕೆಂದರೆ ಈ
ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ
ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳು ಸೂರ್ಯನಿಂದ
ನಡೆಯುತ್ತಿವೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.
*ರಥಸಪ್ತಮಿ* ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ
ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ
ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ *ಮಾಘಸ್ನಾನ* ತುಂಬಾ
ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ
ಪ್ರಾಪ್ತಿಯಾಗುತ್ತದೆಂದು ಪುರಾಣದಲ್ಲಿದೆ.
ಸೂರ್ಯನ ಆರಾಧನೆ ಋಗ್ವೇದದ
ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ
ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ
ಸೌರಮಾನ ಎಣಿಕೆ ಇಂದಿಗೂ ಇದೆ. ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ
ಸಾಮರ್ಥ್ಯಗಳನ್ನು ಕೊಂಡಾಡುವ ಉದ್ದೇಶದಿಂದಲೇ ಬಳಸಲಾಗಿದೆ.
ದ್ವಾಪರಯುಗದಲ್ಲಿ ಶ್ರೀ
ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ
ಹುಟ್ಟಿದ ಮಗನು ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ವಿವರ
ಪಡೆದು ಸಂಚಿತ ಕರ್ಮದಿಂದ ಬಂದಿರುವ ಈ ಖಾಯಿಲೆಗೆ ರಥಸಪ್ತಮಿ ವ್ರತ ಆಚರಿಸಲು ಹೇಳಿದ್ದರು.
ಅದರಂತೆ ರಥಸಪ್ತಮಿಯ ದಿನ ಸೂರ್ಯಾರಾಧನೆ ಮಾಡಲಾಗಿ ರಾಜಪುತ್ರನು ಆರೋಗ್ಯವಂತನೂ,
ಪ್ರಭಾವಶಾಲಿಯು ಆದನು. ಅಲ್ಲದೇ ಪಾಂಡವರು ವನವಾಸದ ಅವಧಿಯಲ್ಲಿ ಕೃಷ್ಣನ ಆದೇಶದಂತೆ
*ಸೂರ್ಯಾರಾಧನೆ* ಮಾಡಿ ಸೂರ್ಯನಿಂದ ಅಕ್ಷಯ ಪಾತ್ರೆ ಪಡೆದಿದ್ದರು. ಅಲ್ಲದೆ ರಾವಣನನ್ನು
ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ *ಆದಿತ್ಯ ಹೃದಯ*ದ ಮೂಲಕ ಸೂರ್ಯನ
ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ
ಶಮಂತಕ ಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ
ಶಿಸೂರ್ಯಶತಕಷಿವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು
ಹೇಳುತ್ತಾರೆ.
ಶ್ರೀರಾಮ ಸೂರ್ಯವಂಶದವನಾದರೆ, ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ
ಅಷ್ಟದಿಕ್ಪಾಲಕರಲ್ಲಿ ಯಮ ಸೂರ್ಯನ ಪುತ್ರರಾಗಿದ್ದಾರೆ.
ವ್ಯಕ್ತಿಯ ಜನ್ಮ ಕುಂಡಲಿಯಲ್ಲಿ ಸೂರ್ಯನು ಬಲಹೀನನಾಗಿದ್ದರೆ ಅಥವಾ
ಷಡ್ಬಲವಿರದಿದ್ದರೆ ರಥಸಪ್ತಮಿಯಂದು ಸೂರ್ಯಾರಾಧನೆ ಮಾಡಿದರೆ ದೋಷ ಪರಿಹಾರವಾಗುತ್ತದೆ.
ಮಾಣಿಕ್ಯದ ಹರಳು ಧರಿಸಲು ಶುಭ ದಿನವಾಗಿದೆ. ಈ ಸೂರ್ಯರಾಧನೆ ಮುಖ್ಯವಾಗಿ ಭಾರತ, ಮಧ್ಯ
ಆಫ್ರಿಕಾ, ಈಜಿಪ್ತ್, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.
*ರಥ ಸಪ್ತಮಿ*ಯು ಯಾವಾಗಲೂ ಅರುಣುದೋಯ ವ್ಯಾಪಿನಿಯಾಗಿರುವುದರಿಂದ ಸರಿಯಾಗಿ
ಸೂರ್ಯೋದಯಕ್ಕೆ ಆಚರಣೆ ಮಾಡಬೇಕು. *ರಥಸಪ್ತಮಿ*ಯಂದು ಸೂರ್ಯೋದಯ ಕಾಲಕ್ಕೆ ಸ್ನಾನ
ಮಾಡಬೇಕು. ಏಳು ಎಕ್ಕೆಯ ಎಲೆಯನ್ನು ತಲೆ, ಹೆಗಲು, ಮೊಣಕಾಲು ಮತ್ತು ಪಾದಗಳ ಮೇಲೆ
ಇಟ್ಟುಕೊಂಡು ಸ್ನಾನಮಾಡುವುದು ವಿಶೇಷ.
*ಸ್ನಾನಕಾಲಕ್ಕೆ ಪಠಿಸಬೇಕಾದ ಮಂತ್ರಗಳು* -
ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ || ೧||
ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋವಾಕ್ಕಾಯಜಂ
ಯಚ್ಚ ಜ್ಞಾತಾಜ್ಞಾತೇ ಚ ಯೇ ಪುನಃ||೨|
ತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತಸಪ್ತಿಕೇ |
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮೀ || ೩ ||
ಹೀಗೆ
ಯಾರು ಈ ಮೂರು ಮಂತ್ರೋಚ್ಚಾರಣ ಪೂರಕ ಸ್ನಾನ ಮಾಡಿ ಸೂರ್ಯ ಮತ್ತು ಕೇಶವನ ದರ್ಶನವನ್ನು
ಮಾಡುತ್ತಾರೋ, ಅವರು ಕ್ಷಣಮಾತ್ರದಲ್ಲಿ ಪಾಪಗಳಿಂದ ಮುಕ್ತರಾಗುವರು. (ನಿರ್ಣಯ ಸಿಂಧು)
*ಸ್ನಾನಾನಂತರ ಸೂರ್ಯ ಮತ್ತು ಸಪ್ತಮಿ ತಿಥಿಗೆ ಅರ್ಘ್ಯ* -
ಒಂದು
ತಾಮ್ರದ ಕಲಶದಲ್ಲಿ (ತಂಬಿಗೆ) ಶುದ್ಧವಾದ ಜಲ, ಅಕ್ಷತೆ, ಚಂದನ, ಬಿಳಿಬಣ್ಣದ ಹೂವುಗಳು,
ಗರಿಕೆ, ಎಕ್ಕೆಯ ಎಲೆಗಳನ್ನು ತುಂಬಿಸಿ, ಮುಂದಿನ ಮಂತ್ರಗಳಿಂದ ಸೂರ್ಯ ಮತ್ತು ಸೂರ್ಯ
ಜನನೀಯಾದ ಸಪ್ತಮಿ ತಿಥಿಗೂ ಸಹ ಅರ್ಘ್ಯವನ್ನು ಕೊಡಬೇಕು.
*ಸೂರ್ಯಾರ್ಘ್ಯ ಮಂತ್ರ* -
ಸಪ್ತಸಪ್ತಿವಹ ಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ ||
ಎಂದು ಸೂರ್ಯನಿಗೆ ಅರ್ಘ್ಯವನ್ನು ಕೊಡಬೇಕು.
*ಸಪ್ತಮಿ ಅರ್ಘ್ಯಮಂತ್ರ* -
ಜನನೀ ಸರ್ವಲೋಕಾನಾಂ ಸಪ್ತಮೀ ಸಪ್ತಸಪ್ತಿಕೇ |
ಸಪ್ತವ್ಯಾಹೃತಿಕೇ ದೇವಿ ನಮಸ್ತೇ ಸೂರ್ಯಮಂಡಲೇ ||
ಎಂದು ಸಪ್ತಮೀತಿಥಿಯ ಕುರಿತು ಅರ್ಘ್ಯ ಕೊಡಬೇಕು.
*ರಥಸಪ್ತಮಿ*ಯ ಪರ್ವ ಎಲ್ಲಾ ರಾಶಿಯವರಿಗೂ ವಿಶೇಷ ಫಲಪ್ರದ. ಸೂರ್ಯನು ಯಾವುದೇ
ಜಾತಕದಲ್ಲಿ ಆತ್ಮರೂಪಿಯಾಗಿ ಇರುತ್ತಾನೆ, ಆದ್ದರಿಂದ ಅವನ ಪ್ರೀತ್ಯರ್ಥ ಪೂಜಾಕಾರ್ಯ
ಆರೋಗ್ಯ, ಸಂಪತ್ತು ಮತ್ತು ಆನಂದಪ್ರದ.
*ಇದು ರಥಸಪ್ತಮಿ ಮಾತ್ರವಲ್ಲ: ಆರೋಗ್ಯಸಪ್ತಮಿ*
*****************************************************************************************************************************************************************************************************
*****************************************************************************************************************************************************************************************************
No comments:
Post a Comment